Top News

ಬಂಟ್ವಾಳದಲ್ಲಿ 20 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣದ ಆರೋಪಿ ಪತ್ತೆ ; ಅಂತರ್ ರಾಜ್ಯದ ಕಳ್ಳನ ಬಂಧನ

ಬಂಟ್ವಾಳ: ಬಸ್‌ನಲ್ಲಿ ಬ್ಯಾಗ್ ಒಳಗಡೆ ಇಟ್ಟಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣವನ್ನು ಬಂಟ್ವಾಳ ನಗರ ಪೊಲೀಸರು ಭೇದಿಸಿದ್ದು, ಅಂತರ್ ರಾಜ್ಯದ ಆರೋಪಿಯನ್ನು ಬಂಧಿಸಿ ಸುಮಾರು 20 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

2025ರ ನವೆಂಬರ್ 19ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಸ್ ಪ್ರಯಾಣದ ವೇಳೆ ಬ್ಯಾಗ್ ಒಳಗಡೆ ಇರಿಸಿದ್ದ ಸುಮಾರು 170ರಿಂದ 180 ಗ್ರಾಂ ತೂಕದ ಚಿನ್ನಾಭರಣ ಕಳ್ಳತನವಾಗಿತ್ತು. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.132/2025ರಂತೆ, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ತನಿಖೆ ವೇಳೆ ಮಧ್ಯಪ್ರದೇಶ ರಾಜ್ಯದ ಧಾರಾ ಜಿಲ್ಲೆಯ ಸಮದ್ ಖಾನ್ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿತನಿಂದ ಕಳ್ಳತನ ಮಾಡಿದ 174 ಗ್ರಾಂ ತೂಕದ ಅಂದಾಜು 20 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.

Post a Comment

Previous Post Next Post