ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 255 ರನ್ ಗಳಿಸಿದೆ.
ಭಾರತದ ಪರ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅದ್ಭುತ ಆಟ ಪ್ರದರ್ಶಿಸಿ ಕೇವಲ 46 ಎಸೆತಗಳಲ್ಲಿ 89 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಮತ್ತು 8 ಸಿಕ್ಸರ್‌ಗಳು ಸೇರಿದ್ದವು. ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೂಡ ವೇಗದ ಅರ್ಧಶತಕ ಬಾರಿಸಿ 21 ಎಸೆತಗಳಲ್ಲಿ 52 ರನ್ ಗಳಿಸಿದರು.
ಇಶಾನ್ ಕಿಶನ್ 25 ಎಸೆತಗಳಲ್ಲಿ 54 ರನ್ ಗಳಿಸಿ ತಂಡದ ಮೊತ್ತವನ್ನು ಇನ್ನಷ್ಟು ಹೆಚ್ಚಿಸಿದರು. ಅಂತಿಮ ಓವರ್‌ಗಳಲ್ಲಿ ಶಿವಂ ದುಬೆ ಕೇವಲ 8 ಎಸೆತಗಳಲ್ಲಿ 26 ರನ್ ಗಳಿಸಿ ವೇಗ ಹೆಚ್ಚಿಸಿದರು. ಹಾರ್ದಿಕ್ ಪಾಂಡ್ಯಾ 18 ರನ್ ಗಳಿಸಿದರು.
ನ್ಯೂಜಿಲೆಂಡ್ ಪರ ಜೇಮ್ಸ್ ನೀಶಮ್ 4 ಓವರ್‌ಗಳಲ್ಲಿ 46 ರನ್ ನೀಡಿ 3 ವಿಕೆಟ್ ಪಡೆದರು. ಮ್ಯಾಟ್ ಹೆನ್ರಿ ಮತ್ತು ರಚಿನ್ ರವೀಂದ್ರ ತಲಾ ಒಂದು ವಿಕೆಟ್ ಪಡೆದರು.
ಮೊದಲಿಗೆ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಈಗ ನ್ಯೂಜಿಲೆಂಡ್ ತಂಡಕ್ಕೆ ಗೆಲುವಿಗಾಗಿ 256 ರನ್ ಗುರಿ ಎದುರಾಗಿದೆ.
Post a Comment