Top News

ದಾಖಲೆಯ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ: ₹4.48 ಲಕ್ಷ ಕೋಟಿ ಅಯವ್ಯಯ, 50ಕ್ಕೂ ಹೆಚ್ಚು ಉತ್ಪನ್ನಗಳಿಗೆ GI ಮಾನ್ಯತೆ ಘೋಷಣೆ


ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026–27ನೇ ಸಾಲಿನ ಬಹುನಿರೀಕ್ಷಿತ ಕರ್ನಾಟಕ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದೆ.

ಬಜೆಟ್ ಮಂಡನೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2026–27ನೇ ಸಾಲಿನ ಅಯವ್ಯಯ ಮಂಡಿಸುತ್ತಿರುವುದು ಸಂತೋಷದ ಸಂಗತಿ ಎಂದು ಹೇಳಿದರು. ನಮ್ಮ ಸರ್ಕಾರವು ರಾಜ್ಯದ ಕೋಟ್ಯಾಂತರ ಕುಟುಂಬಗಳ ಅಭಿವೃದ್ಧಿಗೆ ಬದ್ಧವಾಗಿ ಕೆಲಸ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಮಹತ್ವದ ಸಾಧನೆಗಳನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು.

ಈ ಬಜೆಟ್‌ನಲ್ಲಿ ರಾಜ್ಯದ 50 ಕ್ಕೂ ಹೆಚ್ಚು ಉತ್ಪನ್ನಗಳಿಗೆ ಜಿಐ (Geographical Indication) ಮಾನ್ಯತೆ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಘೋಷಿಸಿದರು. ಇದೇ ವೇಳೆ ರಾಜ್ಯದ ಒಟ್ಟು ಸಾಲವು ₹8,24,389 ಕೋಟಿ ರೂಪಾಯಿಗೆ ತಲುಪಿದೆ ಎಂದು ಸಿಎಂ ಮಾಹಿತಿ ನೀಡಿದರು.
ದಲಿತ ಕವಿ ಸಿದ್ದಲಿಂಗಯ್ಯ ಅವರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪನೆ ಮಾಡುವುದಾಗಿ ತಿಳಿಸಿದ ಸಿಎಂ, 2026–27ನೇ ಸಾಲಿನ ಬಜೆಟ್ ಗಾತ್ರವು ₹4.48 ಲಕ್ಷ ಕೋಟಿ ರೂಪಾಯಿಯಾಗಿದೆ ಎಂದು ಹೇಳಿದರು.

Post a Comment

Previous Post Next Post