Top News

ಕಸಬಾ ಬೆಂಗ್ರೆಯಲ್ಲಿ ಅಕ್ರಮ ಕಸಾಯಿಖಾನೆ ಪತ್ತೆ: 9 ಪ್ರಾಣಿಗಳ ರಕ್ಷಣೆ, ಪೆತ್ತ ಕಬೀರ್ ಸೇರಿ ಐವರ ವಿರುದ್ಧ ಪ್ರಕರಣ

ಮಂಗಳೂರು ನಗರ ಪೊಲೀಸ್ ವತಿಯಿಂದ ನೀಡಿದ ಪತ್ರಿಕಾ ಪ್ರಕಟಣೆ ಪ್ರಕಾರ, ದಿನಾಂಕ 18.03.2026 ರಂದು ಬೆಳಿಗ್ಗೆ 9.15 ಗಂಟೆಗೆ ಮಂಗಳೂರು ತಾಲೂಕು ಕಸಬಾ ಬೆಂಗ್ರೆ ಗ್ರಾಮದ ಬದ್ರಿಯಾ ಜುಮ್ಮಾ ಮಸೀದಿಯ ಸಮೀಪ ಅಹಮ್ಮದ್ ಎಂಬವರ ಮನೆಯ ಹಿಂಭಾಗದಲ್ಲಿರುವ ಫಲ್ಗುಣಿ ನದಿಯ ದಡದ ಶೆಡ್‌ನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಲಾಗುತ್ತಿದೆ ಎಂಬ ಮಾಹಿತಿ ದೊರಕಿತು.

ಈ ಮಾಹಿತಿ ಆಧರಿಸಿ, ಎಸಿಪಿ ಶ್ರೀಕಾಂತ್ ಮತ್ತು ಪಿಐ ಸಲೀಂ ಅಬ್ಬಾಸ್ ಅವರ ಮಾರ್ಗದರ್ಶನದಲ್ಲಿ ಪಣಂಬೂರು ಠಾಣೆಯ ಪಿಎಸ್ಐ  ಶ್ರೀಕಲಾ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದರು. ದಾಳಿಯ ವೇಳೆ ಅಕ್ರಮವಾಗಿ ವಧೆ ಮಾಡಲು ಕಟ್ಟಿಹಾಕಿದ್ದ 9 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದ್ದು, ಈಗಾಗಲೇ ವಧೆ ಮಾಡಿ ಮಾರಾಟಕ್ಕೆ ಸಂಗ್ರಹಿಸಿದ್ದ ಸುಮಾರು 205 ಕೆಜಿ ಜಾನುವಾರು ಮಾಂಸ ಹಾಗೂ ವಧೆಗೆ ಬಳಸಿದ ಪರಿಕರಗಳನ್ನು ವಶಪಡಿಸಿಕೊಳ್ಳಲಾಯಿತು.

ಈ ಕೃತ್ಯದಲ್ಲಿ ಭಾಗಿಯಾಗಿದ್ದ ಕಸಬಾ ಬೆಂಗ್ರೆಯ ಕಬೀರ್ ಅಲಿಯಾಸ್ ಪೆತ್ತ ಕಬೀರ್, ಜೋಕಟ್ಟೆ ನಿವಾಸಿ ಬದ್ರು ಅಲಿಯಾಸ್ ಬದ್ರುದ್ದೀನ್ ಸೇರಿದಂತೆ ಇತರ ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸ್ ತಂಡ ರಚಿಸಲಾಗಿದೆ.

ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 42/2026 ಅಡಿ BNS ಕಲಂ 303(2) ಹಾಗೂ ಕರ್ನಾಟಕ ಪಶುವಧೆ ನಿರ್ಬಂಧ ಮತ್ತು ಸಂರಕ್ಷಣೆ ಕಾಯ್ದೆ-2020ರ ಕಲಂ 4, 7, 12 ಮತ್ತು ಪ್ರಾಣಿಗಳ ಮೇಲೆ ಕ್ರೌರ್ಯ ತಡೆ ಕಾಯ್ದೆಯ ಕಲಂ 11ರಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Post a Comment

Previous Post Next Post