Top News

ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ಬೆದರಿಕೆ: ಪ್ರಚೋದನಕಾರಿ ಕಾಮೆಂಟ್ ಮಾಡಿದ ಆರೋಪಿ ಬಂಧಿಸಿದ ಪೊಲೀಸರು


ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ನಡೆಸುವುದಾಗಿ ಇನ್‌ಸ್ಟಾಗ್ರಾಂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಕಾಮೆಂಟ್ ಮಾಡಿದ್ದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

“Support madi bro Ullal masjid hathira bomb blast madthini” ಎಂದು ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಮಾಡುವ ಮೂಲಕ ಧರ್ಮಗಳ ನಡುವೆ ವೈರತ್ವ, ದ್ವೇಷ ಹಾಗೂ ವೈಮನಸ್ಸು ಉಂಟುಮಾಡಿ ಹಿಂಸೆಗೆ ಪ್ರಚೋದನೆ ನೀಡಿದ ಆರೋಪದಡಿ ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 41/2026 ಅಡಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 196(2), 197(2), 299 ಹಾಗೂ 353(2) ಅನ್ವಯ ಪ್ರಕರಣ ದಾಖಲಾಗಿದೆ.
ಇಂದು (03-03-2026) ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಪ್ರಕರಣದ ಆರೋಪಿಯಾದ ಶಂಕರ್ ಮಸ್ತಪ್ಪ ಮೊಗೆರ್ (35), ತಂದೆ: ದಿವಂಗತ ಮಸ್ತಪ್ಪ, ನಿವಾಸಿ ದೇವಿನಗರ, ಜಾಲಿ, ಭಟ್ಕಳ, ಉತ್ತರ ಕನ್ನಡ ಅವರನ್ನು ಬಂಧಿಸಿದೆ. ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರು ನಗರದ ಮಾನ್ಯ 7ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Post a Comment

Previous Post Next Post