Top News

ಮಂಗಳೂರು: ಭಾರತೀಯ ವೈದ್ಯಕೀಯ ಸಂಘದಿಂದ ಶೈಕ್ಷಣಿಕ ಕಾರ್ಯಗಾರ


ಮಂಗಳೂರು : Indian Medical Association (ಐಎಂಎ) ಮಂಗಳೂರು ಶಾಖೆಯ ಆಶ್ರಯದಲ್ಲಿ ಶೈಕ್ಷಣಿಕ ಕಾರ್ಯಗಾರವು ಶುಕ್ರವಾರ ಸಂಘದ ಡಾ. ಎ.ವಿ. ರಾವ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಡಾ. ಸದಾನಂದ ಪೂಜಾರಿ ಅವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ಡಾ. ಸದಾನಂದ ಪೂಜಾರಿ ಅವರು ಸದಸ್ಯರು ಮತ್ತು ಅತಿಥಿಗಳನ್ನು ಸ್ವಾಗತಿಸಿ, ವೈದ್ಯರ ನಿರಂತರ ವೈದ್ಯಕೀಯ ಶಿಕ್ಷಣದ ಭಾಗವಾಗಿ ಈ ಶೈಕ್ಷಣಿಕ ಕಾರ್ಯಗಾರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಸದಸ್ಯರು ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಡಾ. ತಿಮ್ಮಯ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಡಾ. ಅನಿಮೇಶ್ ಜೈನ್ ಸಂಪಾದಕತ್ವದ ಸಂಘದ ವಾರ್ತಾಪತ್ರಿಕೆ “ಮೆಡಿಲೋರ್” ಅನ್ನು ಅನಾವರಣಗೊಳಿಸಲಾಯಿತು.
ನಗರದ ಎ.ಜೆ. ಆಸ್ಪತ್ರೆಯ ಮೂತ್ರಪಿಂಡ ಶಾಸ್ತ್ರ ತಜ್ಞ ಡಾ. ರಾಘವೇಂದ್ರ ನಾಯಕ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮೂತ್ರಪಿಂಡ ಮತ್ತು ಹೃದ್ರೋಗ ಶಾಸ್ತ್ರದಲ್ಲಿ ಇತ್ತೀಚಿನ ಬೆಳವಣಿಗೆಗಳು, ಪರಿಕಲ್ಪನೆಗಳು ಹಾಗೂ ಚಿಕಿತ್ಸಾ ವಿಧಾನಗಳ ಕುರಿತು ಉಪನ್ಯಾಸ ನೀಡಿದರು. ಇದೇ ವೇಳೆ ನಗರದ Father Muller Medical College ಹೃದ್ರೋಗ ತಜ್ಞ ಡಾ. ಪ್ರದೀಪ್ ಪಿರೇರಾ ಅವರು ಹೃದಯಾಘಾತ ಹಾಗೂ ಹೃದಯ ವೈಫಲ್ಯ ಸಂದರ್ಭದ ತುರ್ತು ನಿರ್ವಹಣೆ ಕುರಿತು ಅತಿಥಿ ಉಪನ್ಯಾಸ ನೀಡಿದರು.

ಇನ್ನೊಂದೆಡೆ ಮುಂಬಯಿ ನಗರದ P. D. Hinduja Hospital ಆಸ್ಪತ್ರೆಯ ಅರ್ಬುದ ರೋಗ ಶಸ್ತ್ರ ಚಿಕಿತ್ಸಕ ಡಾ. ಮುರದ ಲಾಲ ಅವರು ತಮ್ಮ ಸಾಹಸಮಯ ಅನುಭವವನ್ನು ಹಂಚಿಕೊಂಡರು. 42 ದಿನಗಳ ಅವಧಿಯಲ್ಲಿ ವಿಶ್ವದ ಅತಿ ಎತ್ತರದ Mount Everest (29,000 ಅಡಿ) ಶಿಖರಾರೋಹಣ ಸಾಧನೆ ಕುರಿತು ಹಾಗೂ ಅದರ ವೇಳೆ ಎದುರಿಸಿದ ಸವಾಲುಗಳ ಬಗ್ಗೆ ದೃಶ್ಯ-ಶ್ರಾವ್ಯ ಮಾಧ್ಯಮದ ಮೂಲಕ ವಿವರಿಸಿದರು.

ವೈದ್ಯಕೀಯ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಹಾಗೂ ಪರ್ವತಾರೋಹಣದಲ್ಲಿ ಸಾಧನೆ ಪರಿಗಣಿಸಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಸಂಘದ ಕೋಶಾಧಿಕಾರಿ ಡಾ. ಜುಲಿಯನ್ ಸಲ್ದಾನ ಉಪಸ್ಥಿತರಿದ್ದರು. ನಗರದ Indian Red Cross Society ಆಡಳಿತ ಮಂಡಳಿಗೆ ಆಯ್ಕೆಯಾದ ಡಾ. ಸತೀಶ್ ರಾವ್ ಅವರನ್ನು ಅಭಿನಂದಿಸಲಾಯಿತು. ಸಂಘದ ಚುನಾಯಿತ ಅಧ್ಯಕ್ಷ ಡಾ. ಉಲ್ಲಾಸ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯದರ್ಶಿ ಡಾ. ಪ್ರಕಾಶ್ ಹರಿಶ್ಚಂದ್ರ ವಂದಿಸಿದರು.

Post a Comment

Previous Post Next Post