ಬಂಟ್ವಾಳ : ಎರಡು ಬೈಕ್‌ಗಳ ಮಧ್ಯೆ ಭೀಕರ ಅಪಘಾತ – ಯುವ ಛಾಯಾಗ್ರಾಹಕ ದುರ್ಮರಣ

ಬಂಟ್ವಾಳ: ಪಾಣೆಮಂಗಳೂರು ಪ್ರದೇಶದಲ್ಲಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವ ಛಾಯಾಗ್ರಾಹಕನೊಬ್ಬ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ಶಂಭೂರು ನಿವಾಸಿಯಾದ ರಕ್ಷಿತ್ ಶೆಟ್ಟಿ (43) ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪಾಣೆಮಂಗಳೂರು ಬಳಿ ಎರಡು ಬೈಕ್‌ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದ ಪರಿಣಾಮ ಗಂಭೀರವಾಗಿ ಗಾಯಗೊಂಡ ರಕ್ಷಿತ್ ಶೆಟ್ಟಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಕುರಿತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Previous Post Next Post