ಮಂಗಳೂರು: ಕೊಂಕಣಿ ಸಾಹಿತಿ ಹಾಗೂ ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.
ಅವರ ‘ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ’ ಎಂಬ ಸಾಹಿತ್ಯ ವಿಮರ್ಶಾ ಕೃತಿಗೆ ಈ ಗೌರವ ನೀಡಲಾಗಿದೆ. ಸಾಹಿತ್ಯ ವಿಮರ್ಶೆ ವಿಭಾಗದಲ್ಲಿ ಪ್ರಶಸ್ತಿ ಪಡೆದ ಮೊದಲ ಕೊಂಕಣಿ ಕೃತಿ ಎಂಬ ಹೆಗ್ಗಳಿಕೆಗೆ ಈ ಕೃತಿ ಪಾತ್ರವಾಗಿದೆ.
ಈ ಕೃತಿಯನ್ನು ಮಂಗಳೂರಿನ ಕವಿತಾ ಪಬ್ಲಿಕೇಷನ್ಸ್ ಪ್ರಕಟಿಸಿದೆ ಎಂದು ಪ್ರಕಟಣೆ ತಿಳಿಸಿದೆ.
Post a Comment