ಮಂಗಳೂರು: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯ ವಿಚಾರಣೆಗೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಫರಾಜ್ ಅಲಿಯಾಸ್ ಮೊಹಮ್ಮದ್ ಫರಾಜ್ (32) ಎಂದು ಗುರುತಿಸಲಾಗಿದೆ. ಇತ ಮಂಗಳೂರಿನ ದೇರಳಕಟ್ಟೆ ಸಮೀಪದ ಮದನಿನಗರದ ಕೆ2 ಅಪಾರ್ಟ್ಮೆಂಟ್ ನಿವಾಸಿಯಾಗಿದ್ದು,
ಆರೋಪಿಯ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆಯತ್ನ, ಮಾದಕ ವಸ್ತು ಮಾರಾಟ, ಕಳವು ಸೇರಿದಂತೆ ಸುಮಾರು 10 ಪ್ರಕರಣಗಳು ದಾಖಲಾಗಿವೆ. ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ನ್ಯಾಯಾಲಯ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ದರೋಡೆ, ಹಲ್ಲೆ, ಕಳವು ಸೇರಿದಂತೆ ನಾಲ್ಕು ಪ್ರಕರಣಗಳು, ಕೊಣಾಜೆ ಠಾಣೆಯಲ್ಲಿ ಎರಡು ಪ್ರಕರಣಗಳು, ಉತ್ತರ ಠಾಣೆಯಲ್ಲಿ ಅಪಹರಣ ಸೇರಿದಂತೆ ಎರಡು ಪ್ರಕರಣಗಳು ದಾಖಲಾಗಿವೆ. ಬರ್ಕೆ ಠಾಣೆಯಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಯತ್ನ ನಡೆಸಿದ ಒಂದು ಪ್ರಕರಣ ಹಾಗೂ ಉರ್ವ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಒಂದು ಪ್ರಕರಣ ದಾಖಲಾಗಿದೆ.
ಈತನು ಉಳ್ಳಾಲ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಆತನ ವಿರುದ್ಧ ಆರು ವಾರಂಟ್ಗಳು ಮತ್ತು ಒಂದು ಪ್ರೊಕ್ಲಮೇಶನ್ ಜಾರಿಯಲ್ಲಿತ್ತು. ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
Post a Comment