ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಸಾರುವ ಕಮೆಂಟ್ ; ಕಾಸರಗೋಡು ಮೂಲದ ವ್ಯಕ್ತಿ ಬಂಧನ

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಉಂಟುಮಾಡುವ ಉದ್ದೇಶದಿಂದ ಕಮೆಂಟ್ ಹಾಕಿದ ಆರೋಪದ ಮೇಲೆ ಕಾಸರಗೋಡು ಜಿಲ್ಲೆಯ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

2026ರ ಜನವರಿಯಲ್ಲಿ ಮಂಗಳೂರು ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಕಿರಾತ್ (ಕುರಾನ್ ಸ್ಫಟಿಸುವ) ಸ್ಪರ್ಧೆಯ ವಿಡಿಯೋ ಉದಯವಾಣಿ ಫೇಸ್‌ಬುಕ್ ಪುಟದಲ್ಲಿ ಪ್ರಸಾರವಾಗುತ್ತಿದ್ದ ವೇಳೆ, ಗಣೇಶ್ ಪ್ರಸಾದ್ ಎಂಬಾತನು ತನ್ನ ಫೇಸ್‌ಬುಕ್ ಖಾತೆಯಿಂದ “ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ” ಎಂದು ಪ್ರಚೋದನಕಾರಿ ಕಮೆಂಟ್ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು.

ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 15/2026 ರಂತೆ ಬಿ.ಎನ್.ಎಸ್ ಕಲಂ 196 ಮತ್ತು ಐಟಿ ಕಾಯ್ದೆಯ ಕಲಂ 66 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಲಾಗಿತ್ತು.
ತನಿಖೆಯ ವೇಳೆ ಈ ಕಮೆಂಟ್ ಹಾಕಿದ ವ್ಯಕ್ತಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಗಣೇಶ್ ಪ್ರಸಾದ್ (41), ತಂದೆ ಎಸ್.ಎನ್. ಕಬನುರಾಯ ಎಂದು ಗುರುತಿಸಲಾಗಿದೆ.

ದಿನಾಂಕ 27-03-2026 ರಂದು ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Previous Post Next Post