Top News

ಅದ್ಯಪಾಡಿ: ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಆಡಳಿತ ಮೊಕ್ತೇಸರ ಮೋನಪ್ಪ ಮೇಸ್ತ್ರಿ ನಿಧನ

ಮಂಗಳೂರು, ಮಾರ್ಚ್ 08 : ಮಂಗಳೂರು ಸಮೀಪದ ಅದ್ಯಪಾಡಿ ಗ್ರಾಮದ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಆಡಳಿತ ಮೊಕ್ತೇಸರರಾಗಿದ್ದ ಮೋನಪ್ಪ ಮೇಸ್ತ್ರಿ (71) ಅವರು ಭಾನುವಾರ ಬೆಳಿಗ್ಗೆ ಹೃದಯಾಘಾತದಿಂದ ತಮ್ಮ ಸ್ವಗೃಹದಲ್ಲಿ ನಿಧನರಾದರು.

ದೇವಾಲಯದ ಆಡಳಿತದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದ ಮೋನಪ್ಪ ಮೇಸ್ತ್ರಿ ಅವರು ದೇವಸ್ಥಾನದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು. ಅವರ ನೇತೃತ್ವದಲ್ಲಿ ಬಹುಕೋಟಿ ವೆಚ್ಚದಲ್ಲಿ ದೇವಾಲಯವನ್ನು ಪುನರ್‌ನಿರ್ಮಿಸಿ ಬ್ರಹ್ಮಕಲಶ ಹಾಗೂ ಅಷ್ಟಪವಿತ್ರ ನಾಗಬ್ರಹ್ಮ ಮಂಡಲ ಸೇರಿದಂತೆ ಹಲವು ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನೆರವೇರಿಸಲಾಗಿತ್ತು.

ಇತ್ತೀಚೆಗೆ (ಫೆ.18) ಅವರ ಧರ್ಮಪತ್ನಿ ಶಶಿಕಲಾ ಅವರು ಇಹಲೋಕ ತ್ಯಜಿಸಿದ್ದರು. ಮೃತರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ಸ್ವಗೃಹದ ಸಮೀಪದಲ್ಲಿ ನಡೆಯಿತು. ಅವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಅವರ ನಿಧನಕ್ಕೆ ಶಾಸಕ ಡಾ. ಭರತ್ ವೈ. ಶೆಟ್ಟಿ, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಸೇರಿದಂತೆ ಹಲವು ಗಣ್ಯರು ಹಾಗೂ ಭಕ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.

Post a Comment

Previous Post Next Post