ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ನಡೆದ ಮುಖ್ಯ ಪರೀಕ್ಷೆಯಿಂದ 1:3ರ ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆ (ಸಂದರ್ಶನ)ಗೆ ಅಭ್ಯರ್ಥಿಗಳ ಅರ್ಹತಾ ಪಟ್ಟಿ ಸಿದ್ಧಪಡಿಸುವ ವೇಳೆ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ Shalini Rajneesh ಅವರು Karnataka Public Service Commissionನಿಂದ ವರದಿ ಕೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಕೆಪಿಎಸ್‌ಸಿ ಕಾರ್ಯದರ್ಶಿ K Jyothi, ಮುಖ್ಯ ಪರೀಕ್ಷೆಯಿಂದ ವ್ಯಕ್ತಿತ್ವ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸುವ ವೇಳೆ ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಿ ಅರ್ಹರಾದವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆಧಾರವಿಲ್ಲದೆ ಭ್ರಷ್ಟಾಚಾರದ ಆರೋಪ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದರು.
ಇದೇ ವಿಚಾರವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವರದಿ ಕೇಳಿರುವ ಹಿನ್ನೆಲೆಯಲ್ಲಿ ಆಯೋಗದಿಂದ ವಿವರವಾದ ವರದಿಯನ್ನು ಗುರುವಾರ (ಫೆ. 5) ಸಲ್ಲಿಸಲಾಗುತ್ತದೆ. ಅಭ್ಯರ್ಥಿಗಳು ಮಾಡಿರುವ ಆರೋಪಗಳ ಕುರಿತು ಆಂತರಿಕವಾಗಿಯೂ ಪರಿಶೀಲನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
Post a Comment