ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (ಪರೀಕ್ಷೆ-1) ಫಲಿತಾಂಶವನ್ನು ನಾಳೆ, ಏಪ್ರಿಲ್ 23ರಂದು ಮಧ್ಯಾಹ್ನ 12:00 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಿದೆ.
ಫಲಿತಾಂಶ ವೀಕ್ಷಿಸುವುದು ಹೇಗೆ? :
ವಿದ್ಯಾರ್ಥಿಗಳು ಮತ್ತು ಪೋಷಕರು ಈ ಕೆಳಗಿನ ವಿಧಾನಗಳ ಮೂಲಕ ಫಲಿತಾಂಶವನ್ನು ಪಡೆಯಬಹುದು.
ಅಧಿಕೃತ ವೆಬ್‌ಸೈಟ್: https://karresults.nic.in ಮೂಲಕ ಲಭ್ಯ.
ಮೊಬೈಲ್ ಆಪ್: 'KarnatakaOne' ಆಪ್ ಬಳಸಿಯೂ ಫಲಿತಾಂಶ ಪಡೆಯಬಹುದು.
ನೇರ ಸಂದೇಶ: ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ಮಂಡಳಿಯು ವಾಟ್ಸಾಪ್ ಅಥವಾ ಎಸ್‌ಎಂಎಸ್ (SMS) ಮೂಲಕ ಫಲಿತಾಂಶದ ಮಾಹಿತಿಯನ್ನು ರವಾನಿಸಲಿದೆ.
ಡಿಜಿಲಾಕರ್‌ನಲ್ಲಿ ಅಂಕಪಟ್ಟಿ:
ಈ ವರ್ಷದ ವಿಶೇಷವೆಂದರೆ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿ (Marks Card) ಡಿಜಿಲಾಕರ್ (DigiLocker) ಮೂಲಕವೂ ಲಭ್ಯವಿರಲಿದೆ. ನಾಳೆ ಮಧ್ಯಾಹ್ನ 12 ಗಂಟೆಯ ನಂತರ https://www.digilocker.gov.in ಗೆ ಲಾಗಿನ್ ಆಗಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅಲ್ಲದೆ, ಸಂಬಂಧಪಟ್ಟ ಶಾಲೆಗಳಲ್ಲಿಯೂ ಏಪ್ರಿಲ್ 23ರ ಮಧ್ಯಾಹ್ನ 12 ಗಂಟೆಯ ನಂತರ ಫಲಿತಾಂಶದ ಪಟ್ಟಿಯನ್ನು ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ ಎಂದು ಮಂಡಳಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Tags
ರಾಜ್ಯ