ಮಂಗಳೂರು : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ “ಕನ್ನಡದ ಸಾಮರಸ್ಯದ ನೆಲೆಗಳು” ಎಂಬ ಮಹತ್ವದ ಗ್ರಂಥಗಳ ಲೋಕಾರ್ಪಣೆ ಕಾರ್ಯಕ್ರಮ ಏ.13ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಭವ್ಯವಾಗಿ ನಡೆಯಲಿದೆ.
ರಾಜ್ಯದ ಸಮೃದ್ಧ ಸಂಸ್ಕೃತಿ, ವೈವಿಧ್ಯತೆ ಹಾಗೂ ಸಾಮರಸ್ಯದ ಮೌಲ್ಯಗಳನ್ನು ಒಳಗೊಂಡಿರುವ ಈ ಕೃತಿಗಳು ಕನ್ನಡ ಸಾಹಿತ್ಯ ಮತ್ತು ಸಾಮಾಜಿಕ ಏಕತೆಯ ಪ್ರತಿಬಿಂಬವಾಗಿ ಹೊರಹೊಮ್ಮಲಿವೆ.
ಈ ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಭಾಗವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ನಡೆಯಿತು.
ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳು, ಪುಸ್ತಕಗಳ ಮಹತ್ವ ಹಾಗೂ ಜನಸಾಮಾನ್ಯರಿಗೆ ತಲುಪಿಸುವ ಕಾರ್ಯತಂತ್ರಗಳ ಬಗ್ಗೆ ಸಮಗ್ರ ಚರ್ಚೆ ನಡೆಯಿತು.
ಸಭೆಯಲ್ಲಿ ಸಮಿತಿ ಸದಸ್ಯರಾದ ಡಾ.ರಾಜೇಶ್ ಕದ್ರಿ, ದಿವಾಕರ ದಾಸ್ ಕಾವಲಕಟ್ಟೆ, ದೇವಿಪ್ರಸಾದ್ ಬೆಳ್ತಂಗಡಿ, ಹಸೈನಾರ್ ತಾಳಿತ್ತನೂಜಿ ಕೊಳ್ನಾಡು, ರೆಹಮಾನ್ ಖಾನ್ ಕುಂಜತ್ತಬೈಲ್, ಯು.ಎಚ್. ಖಾಲಿದ್ ಉಜಿರೆ, ಸುಜಾತ ದೀಪಕ್ ಮತ್ತು ಶಾಂತ ಎಸ್. ರಾವ್ ಉಪಸ್ಥಿತರಿದ್ದರು. ಕನ್ನಡ ಸಂಸ್ಕೃತಿ ಇಲಾಖೆಯ ರಾಜೇಶ್ ಸ್ವಾಗತಿಸುವ. ದಿವಾಕರ ದಾಸ್ ವಂದಿಸಿದರು.
Tags
ಮಂಗಳೂರು