ಬ್ರಹ್ಮರಕೂಟ್ಟು ಟೋಲ್‌ಗೇಟ್‌ ಬಂದ್‌ಗೆ ಆಗ್ರಹಿಸಿಏಪ್ರಿಲ್‌ 28ರಂದು ಬೃಹತ್‌ ಜನಾಂದೋಲನ ನಡಿಗೆ : ಬಿ.ರಮಾನಾಥ ರೈ


ಮಂಗಳೂರು: ಬ್ರಹ್ಮರಕೂಟ್ಟು ರಾಷ್ಟ್ರೀಯ ಹೆದ್ದಾರಿಯ ಟೋಲ್‌ಗೇಟ್‌ ಅನ್ನು ಸಂಪೂರ್ಣವಾಗಿ ಮುಚ್ಚುವಂತೆ ಆಗ್ರಹಿಸಿ ಏಪ್ರಿಲ್‌ 28ರಂದು ಬೃಹತ್‌ ಜನಾಂದೋಲನ ನಡಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌ ನಾಯಕರು ಹಾಗೂ ಟೋಲ್‌ ಗೇಟ್ ತೆರವು ಹೋರಾಟ ಸಮಿತಿ ಗೌರವಾಧ್ಯಕ್ಷ ಬಿ. ರಮಾನಾಥ ರೈ ತಿಳಿಸಿದ್ದಾರೆ.

ಗುರುಪುರ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿ.ಸಿ. ರೋಡ್‌ನ ನಾರಾಯಣಗುರು ವೃತ್ತದಿಂದ ಬ್ರಹ್ಮರಕೂಟ್ಟು ಟೋಲ್‌ಗೇಟ್‌ ವರೆಗೆ ನಡಿಗೆ ನಡೆಯಲಿದ್ದು, ಈ ಹೋರಾಟದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್‌ ಅಲಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಕ್ಷಣ ಎಚ್ಚೆತ್ತು ನಿಯಮಾವಳಿ ಉಲ್ಲಂಘನೆಯ ವಿರುದ್ಧ ಕ್ರಮ ಕೈಗೊಳ್ಳಬೇಕು.
 ಕಾನೂನುಬಾಹಿರವಾಗಿ 
ನಡೆಯುತ್ತಿರುವ ಸುಂಕ ವಸೂಲಾತಿಯನ್ನು ಶಾಶ್ವತವಾಗಿ ನಿಲ್ಲಿಸುವ ತನಕ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.

ಸಭೆಯಲ್ಲಿ ಗುರುಪುರ ಕಾಂಗ್ರೆಸ್ ಅಧ್ಯಕ್ಷ ಬಿ.ಎಲ್.ಪಿ. ಪದ್ಮನಾಭ ಕೋಟ್ಯಾನ್, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಕೆಪಿಸಿಸಿ ಸದಸ್ಯ ಆರ್.ಕೆ. ಪೃಥ್ವಿರಾಜ್‌, ಬುಡಾ ಅಧ್ಯಕ್ಷ ಬೇಬಿ ಕುಂದರ್ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Previous Post Next Post