AAP to BJP | ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿದ ರಾಘವ್ ಚಡ್ಡಾ

ದೆಹಲಿ ಸೋಶಿಯಲ್ ಮೀಡಿಯಾ ಸೆನ್ಶೇಶನ್ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಆಮ್ ಆದ್ಮಿ ಪಾರ್ಟಿ ತೊರೆದು ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾದರು.
ಚಡ್ಡಾ ಜೊತೆಗೆ ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು ಕೂಡ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. 2022ರಿಂದ ಎಎಪಿ ರಾಜ್ಯಸಭಾ ಸದಸ್ಯರಾಗಿ ಮೂವರೂ ಸೇವೆ ಸಲ್ಲಿಸುತ್ತಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಘವ್ ಚಡ್ಡಾ, “ರಾಜ್ಯಸಭೆಯಲ್ಲಿ ಎಎಪಿಗೆ ಸೇರಿದ 2/3 ನೇ ಸದಸ್ಯರಾದ ನಾವು ದೇಶದ ಸಂವಿಧಾನದ ಪ್ರಕಾರ ನಡೆಯುತ್ತೇವೆ. ನಾವು ಬಿಜೆಪಿಯೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.

ನಾನು ನನ್ನ ಯೌವನದ 15 ವರ್ಷಗಳನ್ನು ನೀಡಿದ ಎಎಪಿ ಈಗ ಅದರ ತತ್ವಗಳು, ಮೌಲ್ಯಗಳು ಮತ್ತು ಮೂಲ ನೈತಿಕತೆಗಳಿಂದ ವಿಮುಖವಾಗಿದೆ. ಎಎಪಿ ಈಗ ದೇಶಕ್ಕಾಗಿ ಅಥವಾ ರಾಷ್ಟ್ರೀಯ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿಲ್ಲ. ಆದರೆ ವೈಯಕ್ತಿಕ ಲಾಭಕ್ಕಾಗಿ ಕೆಲಸ ಮಾಡುತ್ತಿದೆ. ನಾನು ಸರಿಯಾದ ವ್ಯಕ್ತಿ ಆದರೆ ತಪ್ಪಾದ ಪಕ್ಷದಲ್ಲಿದ್ದೆ, ಇಂದು ನಾನು ಎಎಪಿಯಿಂದ ದೂರ ಸರಿದು ಜನರ ಬಳಿಗೆ ಹೋಗುತ್ತಿದ್ದೇನೆ” ಎಂದು ಚಡ್ಡಾ ಹೇಳಿದ್ದಾರೆ.

Post a Comment

Previous Post Next Post