AI ವಿಡಿಯೋ ಪ್ರಕರಣದಲ್ಲಿ ಯೂಟ್ಯೂಬರ್ ಎಂ.ಡಿ. ಸಮೀರ್‌ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್: ತನಿಖೆಗೆ ತಡೆ, ರಾಜ್ಯ ಸರ್ಕಾರಕ್ಕೆ ನೋಟಿಸ್

ಮಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ AI ತಂತ್ರಜ್ಞಾನ ಬಳಸಿ ಕೃತಕ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ದಾಖಲಾದ ಪ್ರಕರಣದಲ್ಲಿ ಯೂಟ್ಯೂಬರ್ ಎಂ.ಡಿ. ಸಮೀರ್ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ಸಮೀರ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಪಡಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ಪ್ರಕರಣದ ಮುಂದಿನ ತನಿಖೆಗೆ ತಾತ್ಕಾಲಿಕ ತಡೆ ನೀಡಿದೆ. ಜೊತೆಗೆ, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.
ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ನಿಗದಿಪಡಿಸಲಾಗಿದೆ. 

ವಿಚಾರಣೆ ವೇಳೆ ನ್ಯಾಯಾಧೀಶರು ಮಾಡಿದ ಕೆಲವು ಅಭಿಪ್ರಾಯಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿವೆ.

ಹಿನ್ನೆಲೆ:
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದ ಹಳೆಯ ಅಸಹಜ ಸಾವಿನ ಪ್ರಕರಣವನ್ನು ಆಧರಿಸಿ, ಎಂ.ಡಿ. ಸಮೀರ್ AI ನೆರವಿನಿಂದ ವಿಡಿಯೋ ರೂಪದಲ್ಲಿ ಮರುಸೃಷ್ಟಿ ಮಾಡಿದ್ದರು. ಈ ವಿಡಿಯೋದಲ್ಲಿ ಕಪೋಲಕಲ್ಪಿತ ಅಂಶಗಳು ಇದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹಾಗೂ ವ್ಯಕ್ತಿಗಳ ಮಾನಹಾನಿಗೆ ಕಾರಣವಾಗುವ ವಿಷಯಗಳಿದ್ದವು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು.
Previous Post Next Post