ಗುರುಪುರ : ಭೀಕರ ಅಪಘಾತ : ಬಸ್ ಹಾಗೂ ಲಾರಿ ಡಿಕ್ಕಿ ; ಬಸ್ ಚಾಲಕರಿಗೆ ಗಂಭೀರ ಗಾಯ !

ಗುರುಪುರ: ಮಂಗಳೂರು ಹೊರವಲಯದ ಗುರುಪುರ ಸಮೀಪದ ಕೈಕಂಬದಲ್ಲಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ವಿರುದ್ಧ ದಿಕ್ಕಿನಿಂದ ಅತಿ ವೇಗವಾಗಿ ಬಂದ ಲಾರಿಯೊಂದು ಪ್ರಯಾಣಿಕರ ಬಸ್‌ಗೆ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ, ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಬಸ್ ಚಾಲಕರ ಕಾಲು ಮುರಿದು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದೇ ವೇಳೆ, ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಘಟನೆಯ ಪರಿಣಾಮವಾಗಿ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದು, ಸಂಚಾರ ಪುನಃಸ್ಥಾಪನೆಗೆ ಪ್ರಯತ್ನ ಮುಂದುವರಿದಿದೆ.
Previous Post Next Post