ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ ; ನಿರಂತರ ಶೋಧ ಕಾರ್ಯದ ಬಳಿಕ ಶವ ಪತ್ತೆ

ಮಂಗಳೂರು ಸಮೀಪದ ಗುರುಪುರದ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಬುಧವಾರ ಆತ್ಮಹತ್ಯೆ ಮಾಡಿಕೊಂಡ ಯುವಕನ ಶವ ಗುರುವಾರ ಮಧ್ಯಾಹ್ನ ನದಿಯಲ್ಲಿ ಪತ್ತೆಯಾಗಿದೆ.

ಕಜೆ ಪಡ್ಡಾಯಿಬೆಟ್ಟು ನಿವಾಸಿ ಆಗಿದ್ದ ಕೌಶಿಕ್(30) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ತನ್ನ ದ್ವಿಚಕ್ರ ವಾಹನವನ್ನು ನಿಲ್ಲಿಸಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಗಳೂರಿನಲ್ಲಿ ಬಸ್ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಆತ್ಮಹತ್ಯೆ ಪ್ರಕರಣ ಗಮನಕ್ಕೆ ಬರುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶೋಧ ಕಾರ್ಯ ಆರಂಭಿಸಿದ್ದರು. ಸ್ಥಳೀಯರು ಶೋಧ ಕಾರ್ಯದಲ್ಲಿ ಸಾಥ್ ನೀಡಿದ್ದರು.
Previous Post Next Post