ವಿಟ್ಲ : ಮುನ್ನೆಚ್ಚರಿಕೆ ಇರದೆ ಅಕ್ರಮವಾಗಿ ಸುಡುಮದ್ದು ತಯಾರಿಕೆ ಪತ್ತೆ ; ಆರೋಪಿಯ ಬಂಧನ

ಬಂಟ್ವಾಳ ತಾಲೂಕಿನ ವಿಟ್ಲ ಕಂಬಳಬೆಟ್ಟು ಸಮೀಪದ ಅಮೈ ಪ್ರದೇಶದಲ್ಲಿ ಅಕ್ರಮವಾಗಿ ಸುಡುಮದ್ದುಗಳನ್ನು ತಯಾರು ಮಾಡುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಭೇದಿಸಿದ್ದಾರೆ. 

ಸ್ಥಳೀಯ ನಿವಾಸಿ ಜಗದೀಶ ಪೂಜಾರಿ ಎಂಬವರು ತಮ್ಮ ಮನೆಯ ಆವರಣದಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದೆ ಸುಡುಮದ್ದಿಗೆ ಅಗತ್ಯವಾದ ಸ್ಪೋಟಕ ಸಾಮಾಗ್ರಿಗಳನ್ನು ಸಂಗ್ರಹಿಸಿ ತಯಾರಿಸುತ್ತಿರುವ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದರು.

ದಿನಾಂಕ ಏ.13ರಂದು ರಾತ್ರಿ ವಿಟ್ಲ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಬಿ.ಎಸ್. ನಾಯಕ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಸುಮಾರು 1.9 ಕೆ.ಜಿ. ತೂಕದ ಸ್ಪೋಟಕದಂತಿರುವ ಸಂಶಯಾಸ್ಪದ ವಸ್ತು ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 93/2026ರಂತೆ ಪ್ರಕರಣ ದಾಖಲಿಸಲಾಗಿದೆ. 1884ರ ಸ್ಪೋಟಕ ಕಾಯ್ದೆಯ ಕಲಂ 9B, 1908ರ ಸ್ಪೋಟಕ ವಸ್ತುಗಳ ಕಾಯ್ದೆಯ ಕಲಂ 5 ಹಾಗೂ 2023ರ ಭಾರತೀಯ ನ್ಯಾಯ ಸಂಹಿತೆಯ ಕಲಂ 288ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.
Previous Post Next Post