ಕಾಪು : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರು ಹಾಗೂ ಲಾರಿ ಡಿಕ್ಕಿಯಾಗಿ ಓರ್ವ ಮೃ*ತಪಟ್ಟ ಘಟನೆ ಗುರುವಾರ ತಡರಾತ್ರಿ ಕಾಪು ಸಮೀಪದ ಪಾಂಗಳ ಕಟ್ಟಿಕೆರೆಯ ಬಳಿಯಲ್ಲಿ ನಡೆದಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಉಡುಪಿ ಮೂಲದ ಶ್ರೇಯಸ್ ಆಚಾರ್ಯ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.