ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡಕ್ಕೆ ಪ್ರಥಮ, ಉಡುಪಿಗೆ ದ್ವಿತೀಯ ಸ್ಥಾನ ; ರಾಜ್ಯದಲ್ಲಿ ಉತ್ತೀರ್ಣ ಪ್ರಮಾಣದಲ್ಲಿ ಗಣನೀಯ ಏರಿಕೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಇಂದು ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಫಲಿತಾಂಶವನ್ನು ಪ್ರಕಟಿಸಿದೆ. 

ಈ ಬಾರಿ ರಾಜ್ಯದ ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇ. 94.1 ರಷ್ಟಿದ್ದು, ಉತ್ತಮ ಸಾಧನೆ ದಾಖಲಾಗಿದೆ.
ಶೈಕ್ಷಣಿಕ ಸಾಧನೆಯಲ್ಲಿ ಕರಾವಳಿ ಜಿಲ್ಲೆಗಳು ಮತ್ತೆ ಮೇಲುಗೈ ಸಾಧಿಸಿವೆ. ದಕ್ಷಿಣ ಕನ್ನಡ ಜಿಲ್ಲೆ ಶೇ. 98.40 ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆ ಶೇ. 98.18 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.

ಇನ್ನು ಗ್ರಾಮೀಣ ಭಾಗದ ಶಾಲೆಗಳು ಹಾಗೂ ಹಿಂದುಳಿದ ಜಿಲ್ಲೆಗಳಾದ ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳು ಗಮನಾರ್ಹ ಪ್ರಗತಿ ಸಾಧಿಸಿವೆ. ವಿಶೇಷವಾಗಿ ಯಾದಗಿರಿ ಜಿಲ್ಲೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಹೆಚ್ಚಿನ ಉತ್ತೀರ್ಣ ಪ್ರಮಾಣ ದಾಖಲಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ.

ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಹಾಗೂ ಕಲಬುರಗಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.
Previous Post Next Post