ಪ್ರಥಮದರ್ಜೆಯಲ್ಲಿ ಪಾಸ್ ಆಗಿದ್ದರೂ ನಿರೀಕ್ಷಿತ ಅಂಕ ಸಿಗಲಿಲ್ಲವೆಂದು ವಿದ್ಯಾರ್ಥಿನಿ ಆತ್ಮ*ಹತ್ಯೆ

ಎಸ್ಸೆಸ್ಸೆಲ್ಸಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣ ಹೊಂದಿದ್ದರೂ ನಿರೀಕ್ಷೆಯಂತೆ ಅಂಕ ಬಾರದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.

ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ಮಂಜು ಹಾಗೂ ಸವಿತಾ ದಂಪತಿ ಪುತ್ರಿ ತ್ರಿಶಾಲ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎಂದು ತಿಳಿದು ಬಂದಿದೆ.

ನಂಜನಗೂಡಿನ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ತ್ರಿಶಾಲ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದರೂ ಅಂಕ ಕಡಿಮೆ ಬಂದಿದೆ ಎಂದು ನೇಣಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ.

Post a Comment

Previous Post Next Post