ಮಂಗಳೂರಿನಿಂದ ಹುಬ್ಬಳ್ಳಿಗೆ ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್ ಅಗ್ನಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನ ಬಾಗಿಲು ಬಳಿಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಹುಬ್ಬಳ್ಳಿ ಕಡೆ ಸಾಗುತ್ತಿದ್ದ ಈ ಟ್ಯಾಂಕರ್‌ನಲ್ಲಿ ಅಚಾನಕ್ ಬೆಂಕಿ ಕಾಣಿಸಿಕೊಂಡಿದ್ದು, ಪೆಟ್ರೋಲ್ ತುಂಬಿಕೊಂಡಿದ್ದರಿಂದ ಬೆಂಕಿ ಒಮ್ಮೆಲೆ ಹಬ್ಬಿಕೊಂಡಿತು.
ಸಮೀಪದ ಅರಣ್ಯ ಪ್ರದೇಶಕ್ಕೂ ಬೆಂಕಿಯ ಜ್ವಾಲೆ ವ್ಯಾಪಿಸತೊಡಗಿತ್ತು, ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಅಗ್ನಿಯನ್ನು ನಂದಿಸುವಲ್ಲಿ ಸಫಲರಾಗಿದ್ದಾರೆ. ಟ್ಯಾಂಕರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪ್ರಾಣ ಹಾನಿಯ ಬಗ್ಗೆ ವರದಿಯಾಗಿಲ್ಲ.
Tags
ಅಪಘಾತ