ಯಾದಗಿರಿ : ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ; ಒಂದೇ ಕುಟುಂಬದ ಆರು ಮಂದಿ ಸಜೀವ ದಹನ

ಖಾಸಗಿ ಬಸ್ ಮತ್ತು ಕಾರಿನ​​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೇವಾಪುರ ಬಳಿ ನಡೆದಿದೆ.

ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್, ಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾ*ವಿಗೀಡಾಗಿದ್ದಾರೆ.

ವಾಹನ ಅಪಘಾತದ ತೀವ್ರತೆಗೆ ವಾಹನ ಬೆಂಕಿಗೆ ಈಡಾಗಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸಪಟ್ಟರು.

ಅಪಘಾತದಲ್ಲಿ ಮೃತಪಟ್ಟವರನ್ನು ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ನಿವಾಸಿಗಳು ಎಂದು ಗುರುತಿಸಲಾಗಿದೆ. ಅಮವಾಸ್ಯೆ ಹಿನ್ನೆಲೆ ತಿಂತನಿಮೌನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ನಡೆದಿದೆ ಎನ್ನಲಾಗಿದೆ.

ಕಾರಲ್ಲಿದ್ದ ಸರ್ಕಾರಿ ನೌಕರ ಶರಣಪ್ಪ, ಪುರಸಭೆ ಸದಸ್ಯ ಮಲ್ಲಿಕಾರ್ಜುನ್, ಮೂವರು ಮಹಿಳೆಯರು ಸೇರಿ 6 ಮಂದಿ ಮೃತಪಟ್ಟಿದ್ದಾರೆ.

ಕುಟುಂಬದ 6 ಮಂದಿ ಸಜೀವ ದಹನ
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿಯಲ್ಲಿ ಆರು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಂಚಾಯತ್ ಸದಸ್ಯ ಕೃಷ್ಣನಾಯಕ ಕುಟುಂಬಸ್ಥರು ಎಂದು ಗುರುತಿಸಲಾಗಿದೆ. ಮೃತರಲ್ಲಿ ಕೃಷ್ಣನಾಯಕ (52), ಪತ್ನಿ ಅನಂತಕಲಾ (45), ಅಳಿಯ ಶರಣಪ್ಪ (36), ಮಗಳು ನಿಸರ್ಗ (30), ಶಶಿಕಲಾ (30) ಹಾಗೂ ಮಗು ಸಿದ್ಧಾರ್ಥ (3) ಎನ್ನಲಾಗಿದೆ.

ಗಂಭೀರ ಗಾಯ
ಕಾರಿನಲ್ಲಿ ಇದ್ದ ಅದ್ವಿಕಾ (5) ಮತ್ತು ಶ್ರೀನಿಧಿ (ಒಂದೂವರೆ ವರ್ಷದ ಮಗು) ಗಂಭೀರವಾಗಿ ಗಾಯಗೊಂಡಿದ್ದು, ಯಾದಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಿದೆ. ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ
Previous Post Next Post