Udupi | ಉಡುಪಿ: ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಿಸದ ಕೋರ್ಟ್

ಉಡುಪಿ: ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಪತ್ನಿ ಸೌಮ್ಯ ಶೆಟ್ಟಿಗೆ ಉಡುಪಿ ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ಮಾರ್ಚ್ 22ರಂದು ಸುದೀಪ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಾವಿಗೆ ಪತ್ನಿ ಸೌಮ್ಯ ಶೆಟ್ಟಿ ಪ್ರಚೋದನೆ ನೀಡಿದ್ದಾಳೆ ಎಂದು ಆರೋಪಿಸಿ ಸುದೀಪ್ ತಂದೆ ದಾಮೋದರ್ ಅವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಪ್ರಕರಣದ ತನಿಖೆ ಮುಂದುವರಿದಿದ್ದ ಹಿನ್ನೆಲೆಯಲ್ಲಿ ಏಪ್ರಿಲ್ 11ರಂದು ಉಡುಪಿಯಲ್ಲಿ ಪೊಲೀಸರು ಸೌಮ್ಯ ಶೆಟ್ಟಿಯನ್ನು ಬಂಧಿಸಿದ್ದರು. ಬಳಿಕ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬುಧವಾರ ನಡೆದಿದ್ದು, ಪ್ರಕರಣದ ಗಂಭೀರತೆಯನ್ನು ಗಮನಿಸಿದ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.

ಪ್ರಕರಣದ ತನಿಖೆಯನ್ನು ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ಅವರ ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಿದರು.

Post a Comment

Previous Post Next Post