ಬೆಂಗಳೂರು : ತುಳುಕೂಟ ಬೆಂಗಳೂರು (ರಿ.) ವತಿಯಿಂದ ನಗರದ ವಿಜಯನಗರದಲ್ಲಿರುವ ಬಂಟರ ಸಂಘದಲ್ಲಿ ಮೇ 3, ಭಾನುವಾರ ಪ್ರಥಮ ಬಾರಿಗೆ ‘ರಾಜಧಾನಿ ಭಜನೋತ್ಸವ' ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ರಾಜಧಾನಿ ಕುಣಿತ ಭಜನಾ ಸ್ಪರ್ಧೆ’ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ.
ಕಾರ್ಯಕ್ರಮವು ಬೆಳಗ್ಗೆ 8 ಗಂಟೆಯಿಂದ ರಾತ್ರಿ 9.30ರವರೆಗೆ ಕುಕ್ಕುಂಜೋಡು ಸುಂದರ್ ರಾಜ್ ರೈ ವೇದಿಕೆಯಲ್ಲಿ ನಡೆಯಲಿದೆ.
ಬೆಳಗ್ಗೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಧಾಮ ಮಾಣಿಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಹಾಗೂ ರಾಜಧಾನಿ ಕುಣಿತ ಭಜನಾ ಪರಿಷತ್ ಗೌರವಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಜೆ 5.45ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಶುಭಾಶಂಸನೆ ನೀಡಲಿದ್ದಾರೆ.
ತುಳುಕೂಟದ ಅಧ್ಯಕ್ಷ ದಿನೇಶ್ ಹೆಗ್ಡೆ ಬಿ. ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾರಂಭಕ್ಕೆ ಶಾಸಕರಾದ ಎಂ. ಕೃಷ್ಣಪ್ಪ, ಪ್ರಕಾಶ್ ಶೆಟ್ಟಿ ಕೆ. (ಎಂ.ಆರ್.ಜಿ. ಗ್ರೂಪ್), ಗುರ್ಮೆ ಸುರೇಶ್ ಶೆಟ್ಟಿ, ಅಶೋಕ್ ಕುಮಾರ್ ರೈ ಹಾಗೂ ಸ್ಪರ್ಧಾ ಸಂಯೋಜಕರಾದ ಡಾ. ಅರುಣ್ ಉಳ್ಳಾಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸಾಂಸ್ಕೃತಿಕ ವೈವಿಧ್ಯತೆಯ ಅಂಗವಾಗಿ ಮಧ್ಯಾಹ್ನ 1 ಗಂಟೆಗೆ ತುಳುನಾಡಿನ ಸಾಂಪ್ರದಾಯಿಕ ಭೋಜನ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 6.45ಕ್ಕೆ ಕಾರ್ಕಳದ ‘ತೆಲಿಕೆದ ತೆನಾಲಿ’ ತಂಡದಿಂದ ‘ತೆಲಿಕೆದ ಬರ್ಸ’ ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ.
ಕಾರ್ಯಕ್ರಮಕ್ಕೆ ಆಗಮಿಸುವವರು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣವನ್ನು ಬಳಸಿಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದು, ಸಂಘದ ಆವರಣದಲ್ಲಿ ವಾಹನ ನಿಲುಗಡೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ. ತುಳು ಮತ್ತು ಕನ್ನಡದ ಹಲವು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆಯಲಿರುವ ಈ ಭವ್ಯ ಉತ್ಸವಕ್ಕೆ ಸಾರ್ವಜನಿಕರಿಗೆ ಮುಕ್ತ ಆಹ್ವಾನ ನೀಡಲಾಗಿದೆ.
Tags
ಬೆಂಗಳೂರು