ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ?: ಇಂದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ



ಸಿದ್ಧರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

ಬೆಂಗಳೂರು: ಕಳೆದ ಮೂರು ವರ್ಷಗಳಿಂದ ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಬದಲಾವಣೆ ಕುರಿತು ನಡೆಯುತ್ತಿದ್ದ ಚರ್ಚೆಗೆ ಇದೀಗ ಅಂತಿಮ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. 

ಆಂತರಿಕ ‘ಅಧಿಕಾರ ಹಂಚಿಕೆ ಸೂತ್ರ’ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ರಾಜಕೀಯದಲ್ಲಿ ಹೊಸ ನಾಯಕತ್ವದ ಅಧ್ಯಾಯ ಆರಂಭವಾಗುವ ಸೂಚನೆಗಳು ಸ್ಪಷ್ಟವಾಗಿದ್ದು, ಕಾಂಗ್ರೆಸ್ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ.

“ಮುಖ್ಯಮಂತ್ರಿ ಅವರು ನಾಳೆ ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ” ಎಂದು ಸಿಎಂ ಆಪ್ತ ಮೂಲಗಳು ಪಿಟಿಐಗೆ ಮಾಹಿತಿ ನೀಡಿವೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸುವ ಸಾಧ್ಯತೆ ಇದೆ.

ಇದರ ಮಧ್ಯೆ, ಗುರುವಾರ ಬೆಳಗ್ಗೆ 9 ಗಂಟೆಗೆ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಬ್ರೇಕ್‌ಫಾಸ್ಟ್ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಕೂಡ ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಸಭೆಯ ಬಳಿಕ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಘೋಷಿಸುವ ಸಾಧ್ಯತೆ ಇದೆ.

Post a Comment

Previous Post Next Post