ಮಂಗಳೂರು: ಟಿಪ್ಪರ್ ಲಾರಿಯೊಂದು ಸರ್ವಿಸ್ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಇಂದು (ಮೇ 27, 2026) ಹಳೆಯಂಗಡಿಯ ಇಂದಿರಾ ನಗರ ಬಸ್ ನಿಲ್ದಾಣದ ಬಳಿ ನಡೆದಿದೆ.
ಬಸ್ಸಿನ ಹಿಂಭಾಗಕ್ಕೆ ಲಾರಿ ಡಿಕ್ಕಿ ಹೊಡೆದ ತಕ್ಷಣ ಸ್ಥಳದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಮಾಯಿಸಿದ್ದು, ಅದೃಷ್ಟವಶಾತ್ ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.
Tags
ಮಂಗಳೂರು