ಮಂಗಳೂರು: ದಕ್ಷಿಣ ಕನ್ನಡ ಫ್ಲವರ್ ಡೆಕೋರೇಷನ್ ಮಾಲಕರ ಸಂಘ ಉತ್ತರ ವಲಯದ ವತಿಯಿಂದ ಕರಂಬಾರು ಶ್ರೀದೇವಿ ಭಜನಾ ಮಂದಿರದ ಸಭಾಂಗಣದಲ್ಲಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಸುಲಕ್ಷಣ ಬಿ. ರೈ ವಹಿಸಿದ್ದರು. ಸಂಘದ ಸ್ಥಾಪಕ ಅಧ್ಯಕ್ಷರಾದ ಅಶ್ವಿತ್ ಕೊಟ್ಟಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಅನಿಲ್ ಕೊಟ್ಟಾರಿ, ಗೌರವ ಸಲಹೆಗಾರ ಪಕೀರಬ್ಬ ಮಾಸ್ಟರ್, ಸಂಘಟನಾ ಕಾರ್ಯದರ್ಶಿ ಶುಭಂ ನಾಯಕ್, ಕರಂಬಾರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ, ಉತ್ತರ ವಲಯದ ಅಧ್ಯಕ್ಷ ನಿಶ್ಮಿತ್ ಶ್ರೀಯಾನ್ ಹಾಗೂ ವಲಯ ಕಾರ್ಯದರ್ಶಿ ತಿಲಕ್ ರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಉತ್ತರ ವಲಯದ ಅಧ್ಯಕ್ಷ ನಿಶ್ಮಿತ್ ಶ್ರೀಯಾನ್ ಸ್ವಾಗತಿಸಿದರು. ರಾಕೇಶ್ ಕುಂದರ್ ಕಾರ್ಯಕ್ರಮ ನಿರೂಪಣೆ ನಡೆಸಿದರೆ, ನವೀನ್ ಚಂದ್ರ ಸಾಲ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಲಯ ಕಾರ್ಯದರ್ಶಿ ತಿಲಕ್ ರಾಜ್ ಜೋಗಿ ವಂದಿಸಿದರು.
ಕಾರ್ಯಕ್ರಮದಲ್ಲಿ ಸುಮಾರು 30 ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಯಿತು.
Tags
ಮಂಗಳೂರು