ಪಶ್ಚಿಮ ಬಂಗಾಳದ ಸಿಎಂ ಆಕಾಂಕ್ಷಿ, ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಆಪ್ತ ಸಹಾಯಕ ಗುಂಡಿನ ದಾಳಿಗೆ ಬಲಿ

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ ಪ್ರದೇಶದಲ್ಲಿ ಬಿಜೆಪಿ ಮುಖಂಡ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ವರದಿಯಾಗಿದೆ.

ಬುಧವಾರ ಮಧ್ಯಮಗ್ರಾಮದ ಸಾರ್ವಜನಿಕ ರಸ್ತೆಯಲ್ಲಿ ನಡೆದ ಈ ದಾಳಿ ವೇಳೆ, ಸುವೇಂದು ಅಧಿಕಾರಿ ಅವರ ಸಹಾಯಕನನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಚಂದ್ರನಾಥ್ ರಥ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣವೇ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಕ್ಕೆ ಧಾವಿಸಿ ಪ್ರದೇಶವನ್ನು ಸುತ್ತುವರಿದು ಭದ್ರತೆ ಹೆಚ್ಚಿಸಿದ್ದಾರೆ. ಮೃತದೇಹವನ್ನು ಮಧ್ಯಮಗ್ರಾಮದ ಮೆಗಾ ಸಿಟಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

Post a Comment

Previous Post Next Post