ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಸಿಎಂ Siddaramaiah ಅವರ ಮುಂದಿನ ರಾಜಕೀಯ ನಡೆ ಕುರಿತು ಕುತೂಹಲ ಹೆಚ್ಚಾಗಿದೆ. ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಚೇರಿಗೆ ಸಲ್ಲಿಸಿರುವ ಸಿದ್ದರಾಮಯ್ಯ ಅವರು, ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಶೀಘ್ರದಲ್ಲೇ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.
ಇಂದು ಸಂಜೆಯಲ್ಲೇ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಹುದ್ದೆಯಿಂದ ಹಿಂದೆ ಸರಿದ ಬಳಿಕ, ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸುವ ಸಾಧ್ಯತೆ ದಟ್ಟವಾಗಿದೆ.
ಈ ವೇಳೆ ಎಐಸಿಸಿ ನಾಯಕ Rahul Gandhi ಸೇರಿದಂತೆ ಪಕ್ಷದ ಹಿರಿಯ ಮುಖಂಡರನ್ನು ಭೇಟಿಯಾಗಿ, ತಮಗೆ ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಕೃತಜ್ಞತೆ ವ್ಯಕ್ತಪಡಿಸಲಿದ್ದಾರೆ ಎನ್ನಲಾಗಿದೆ.
Tags
ರಾಜ್ಯ