ಮಂಗಳೂರು: ಭಾರತದ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ 12 ವರ್ಷಗಳ ಆಡಳಿತ ಪೂರ್ಣಗೊಳಿಸಿದ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ಮಂಡಲದಿಂದ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ರಂಗಪೂಜೆ ಹಾಗೂ ಪ್ರಾರ್ಥನಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಶಾಸಕ ಡಾ.ವೈ.ಭರತ್ ಶೆಟ್ಟಿಯವರು ದೇಶದ ಅಭಿವೃದ್ಧಿ ಮತ್ತು ಜನಕಲ್ಯಾಣಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇನ್ನಷ್ಟು ಶಕ್ತಿಯುತ ನಾಯಕತ್ವ ನೀಡಲೆಂದು ದೇವರಲ್ಲಿ ಪ್ರಾರ್ಥಿಸಿದರು.
ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಕಾಂಚನ್ ಹಾಗೂ ಸಂದೀಪ್ ಪಚ್ಚನಾಡಿ, ಪಕ್ಷದ ಪದಾಧಿಕಾರಿಗಳು, ಮಾಜಿ ಕಾರ್ಪೊರೇಟರ್‌ಗಳು, ಮುಖಂಡರು, ಕಾರ್ಯಕರ್ತರು ಹಾಗೂ ಭಕ್ತರು ಉಪಸ್ಥಿತರಿದ್ದರು.
Post a Comment