ಬಜಪೆಯಲ್ಲಿ ಎಸ್‌ಡಿಪಿಐ ಬೃಹತ್ ರಕ್ತದಾನ ಶಿಬಿರ: ಒಟ್ಟು 153 ಯುನಿಟ್ ರಕ್ತ ಸಂಗ್ರಹ


ಬಜಪೆ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಿನ್ನಿಪದವಿನ ಲೈಕೋರಿಸ್ ಟೌನ್ ಫ್ಲಾಟ್‌ನಲ್ಲಿ ಆಯೋಜಿಸಲಾದ ಬೃಹತ್ ರಕ್ತದಾನ ಶಿಬಿರವು ಅತ್ಯಂತ ಯಶಸ್ವಿಯಾಗಿ ನಡೆಯಿತು.

ಶಿಬಿರದಲ್ಲಿ ವಿವಿಧ ಸಮುದಾಯಗಳ ಜನರು ಉತ್ಸಾಹದಿಂದ ಭಾಗವಹಿಸಿ ಒಟ್ಟು 153 ಯುನಿಟ್ ರಕ್ತ ದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸಿದರು. ಜಾತಿ, ಧರ್ಮದ ಭೇದವಿಲ್ಲದೆ ಅನೇಕ ಯುವಕರು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಮುಖಂಡರು ಹಾಗೂ ಸಂಘಟಕರು ಮಾತನಾಡಿ, ರಕ್ತದಾನವು ಜೀವ ಉಳಿಸುವ ಮಹತ್ತರ ಸೇವೆಯಾಗಿದ್ದು, ಸಮಾಜದಲ್ಲಿ ಇಂತಹ ಮಾನವೀಯ ಕಾರ್ಯಗಳು ಇನ್ನಷ್ಟು ಹೆಚ್ಚಾಗಬೇಕೆಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಯುವಕರು ಹಾಗೂ ಸಾರ್ವಜನಿಕರಿಗೆ ಎಸ್‌ಡಿಪಿಐ ಬಜಪೆ ಸಮಿತಿಯು ಕೃತಜ್ಞತೆ ಸಲ್ಲಿಸಿದೆ. ರಕ್ತದಾನ ಮಾಡಿದ ಎಲ್ಲ ದಾನಿಗಳಿಗೆ ವಿಶೇಷ ಧನ್ಯವಾದಗಳನ್ನು ತಿಳಿಸಿ, ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡುವಂತೆ ಮನವಿ ಮಾಡಿದೆ.
Previous Post Next Post