ಬಜಪೆ : ಎಸ್‌ಡಿಪಿಐ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಜೂನ್ 21ರಂದು ರಕ್ತದಾನ ಶಿಬಿರ

ಬಜಪೆ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜೂನ್ 21ರಂದು ಬಜಪೆಯ ಕಿನ್ನಿಪದವು ಲ್ಯೆಕೊರಿಸ್ ಟೌನ್ ಫ್ಲಾಟ್‌ನಲ್ಲಿ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 8.30 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮದೊಂದಿಗೆ ದಿನದ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ಬಳಿಕ ರಕ್ತದಾನ ಶಿಬಿರ ನಡೆಯಲಿದೆ.

ಈ ಸಮಾಜಮುಖಿ ಕಾರ್ಯಕ್ರಮದಲ್ಲಿ ಸ್ಥಳೀಯ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಎಸ್‌ಡಿಪಿಐ ಮುಖಂಡರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Previous Post Next Post