ಮಂಗಳೂರು: ಸೌಂದರ್ಯ ಮತ್ತು ಪ್ರತಿಭೆಯ ಸಂಗಮವಾಗಿರುವ 'ಟೀನ್, ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ' ಸೀಸನ್ 7ರ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮ ಜೂನ್ 21ರಂದು ಮಂಗಳೂರಿನ ಸುಲ್ತಾನ್ ಬತ್ತೇರಿಯ ಸಮೀಪವಿರುವ ಬೋಳೂರ್ ಬೇನಲ್ಲಿ ನಡೆಯಲಿದೆ.
ಈ ಪ್ರತಿಷ್ಠಿತ ಕಾರ್ಯಕ್ರಮ ಅಂದು ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಪಾಥ್‌ವೇ ಎಂಟರ್‌ಪ್ರೈಸಸ್ ಮತ್ತು ಮರ್ಸಿ ಬ್ಯೂಟಿ ಅಕಾಡೆಮಿ ಜಂಟಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಪಾಥ್ ವೇ ಮೋಡೆಲಿಂಗ್ ಸ್ಟುಡಿಯೋದ ದೀಪಕ್ ಗಂಗೂಲಿ ಮತ್ತು ಮರ್ಸಿ ಬ್ಯೂಟಿ ಅಕಾಡೆಮಿಯ ಮರ್ಸಿ ವೀನಾ ಡಿಸೋಜಾ ಅವರು ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಈ ಫಿನಾಲೆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಯ್ಕೆಯಾದ ಅನೇಕ ಪ್ರತಿಭಾವಂತ ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ. ಕಾರ್ಯಕ್ರಮದ ಯಶಸ್ಸಿಗೆ ಮಿಸೆಸ್ ಇಂಡಿಯಾದ ಸಂಸ್ಥಾಪಕಿ ಹಾಗೂ ನಿರ್ದೇಶಕಿ ದೀಪಾಲಿ ಫಡ್ನೀಸ್ ಸೇರಿದಂತೆ ಅನುಭವಿಗಳಾದ ಹಲವು ಗಣ್ಯರು ತೀರ್ಪುಗಾರರಾಗಿ ಭಾಗವಹಿಸುತ್ತಿದ್ದು, ಕಾರ್ಯಕ್ರಮದ ಮೆರುಗು ಹೆಚ್ಚಿಸಲಿದ್ದಾರೆ.
Tags
ಮಂಗಳೂರು