ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರೊಫೆಸರ್ ದೇವರಾಜ್ ತಂಗುದೊರೈ ವಿರುದ್ಧ ಪಿಎಚ್‌ಡಿ ವಿದ್ಯಾರ್ಥಿನಿಯೊಬ್ಬಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆಯೆಂಬ ಗಂಭೀರ ಆರೋಪ ಕೇಳಿಬಂದಿದೆ.
ಪ್ರೀತಿಸುವ ನಾಟಕವಾಡಿ ದೈಹಿಕ ಸಂಬಂಧ ಬೆಳೆಸಿದ್ದು, ವಿದ್ಯಾರ್ಥಿನಿಗೆ ಮೂರು ಬಾರಿ ಗರ್ಭಪಾತ ಮಾಡಿಸಲಾಗಿದೆ ಎನ್ನಲಾಗಿದೆ. ಘಟನೆ ಬಹಿರಂಗವಾದ ಬಳಿಕ ವಿದ್ಯಾರ್ಥಿನಿ ಸಂಶೋಧನೆಯನ್ನು ಅರ್ಧಕ್ಕೆ ನಿಲ್ಲಿಸಿ ಮನೆಗೆ ಮರಳಿದ್ದಾಳೆ ಎಂದು ವರದಿಯಾಗಿದೆ. ಇದೇ ವೇಳೆ ಮತ್ತೋರ್ವ ಸಂಶೋಧನಾ ವಿದ್ಯಾರ್ಥಿ ವೇದವ್ಯಾಸ್ ಚೌಹಾಣ್ ಮೇಲೆ ಒತ್ತಡ ಹೇರಿದ ಆರೋಪವೂ ಕೇಳಿಬಂದಿದೆ.
ಪ್ರಕರಣದ ಕುರಿತು ವಿದ್ಯಾರ್ಥಿ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಯನ್ನು ಅಮಾನತುಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ. ವಿಶ್ವವಿದ್ಯಾಲಯ ಆಡಳಿತದ ಮುಂದಿನ ನಡೆಗೆ ಎಲ್ಲರ ಗಮನ ನೆಟ್ಟಿದೆ.
Post a Comment