ಧರ್ಮಸ್ಥಳದಲ್ಲಿ ಬಿಜೆಪಿ ಹೈವೋಲ್ಟೇಜ್ ರಾಜಕೀಯ!ಆಣೆ-ಪ್ರಮಾಣ ರದ್ದಾದ ಬೆನ್ನಲ್ಲೇ ವಿಜಯೇಂದ್ರ ಕರಾವಳಿ ನಾಯಕರೊಂದಿಗೆ ತುರ್ತು ಸಭೆ – ಇಂದು ಬಿಗ್ ಅಪ್ಡೇಟ್ ?

ಮಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳದ 'ಆಣೆ-ಪ್ರಮಾಣ' ರಾಜಕೀಯ ಹೈಡ್ರಾಮಾ ರದ್ದಾದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕರಾವಳಿ ಭಾಗದ ಬಿಜೆಪಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿರುವುದು ಹೊಸ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ಗುರುವಾರ ರಾತ್ರಿ ಧರ್ಮಸ್ಥಳಕ್ಕೆ ಆಗಮಿಸಿರುವ ವಿಜಯೇಂದ್ರ ಅವರು, ಶುಕ್ರವಾರ ಬೆಳಗ್ಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ರಾಜ್ಯಸಭಾ ಚುನಾವಣೆಯ ಅಡ್ಡಮತದಾನ ಪ್ರಕರಣದ ಕುರಿತು ಹೈಕಮಾಂಡ್‌ಗೆ ವರದಿ ಸಲ್ಲಿಸಿದ ಬೆನ್ನಲ್ಲೇ ಈ ಭೇಟಿ ನಡೆದಿರುವುದು ರಾಜಕೀಯ ವಲಯದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಆಣೆ-ಪ್ರಮಾಣ ನಡೆಸುವ ಪ್ರಸ್ತಾವನೆಗೆ ಬಿಜೆಪಿಯ ಕೆಲ ಹಿರಿಯ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಆ ಕಾರ್ಯಕ್ರಮ ರದ್ದಾಗಿತ್ತು. ಆದರೆ ಅದಾದ ತಕ್ಷಣವೇ ರಾಜ್ಯಾಧ್ಯಕ್ಷರು ಕರಾವಳಿ ನಾಯಕರೊಂದಿಗೆ ಧರ್ಮಸ್ಥಳದಲ್ಲೇ ಮೊಕ್ಕಾಂ ಹೂಡಿರುವುದು ರಾಜಕೀಯವಾಗಿ ಮಹತ್ವ ಪಡೆದಿದೆ.

ಇಂದು ವಿಜಯೇಂದ್ರ ಸುದ್ದಿಗೋಷ್ಠಿ ನಡೆಸಲಿದ್ದು, ಪಕ್ಷದ ಮುಂದಿನ ನಡೆ, ಅಡ್ಡಮತದಾನ ಪ್ರಕರಣ ಹಾಗೂ ಭಿನ್ನಮತೀಯರ ವಿರುದ್ಧದ ಕ್ರಮಗಳ ಕುರಿತು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.

ಈ ಭೇಟಿಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಪ್ರಮುಖ ನಾಯಕರು ಭಾಗಿಯಾಗಿದ್ದಾರೆ. ವಿಜಯೇಂದ್ರ ಅವರ ಧರ್ಮಸ್ಥಳ ಭೇಟಿ ರಾಜ್ಯ ಬಿಜೆಪಿಯೊಳಗಿನ ಬೆಳವಣಿಗೆಗಳಿಗೆ ಹೊಸ ತಿರುವು ನೀಡುತ್ತದೆಯೇ ಎಂಬುದನ್ನು ರಾಜಕೀಯ ವಲಯ ಕಾತರದಿಂದ ಗಮನಿಸುತ್ತಿದೆ.
Previous Post Next Post