ಮಂಗಳೂರು : ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಆಶ್ರಯದಲ್ಲಿ ನಗರದ ಕೆಪಿಟಿ ಮೈದಾನದಲ್ಲಿ ಆಯೋಜಿಸಿದ್ದ ಚಾಂಪಿಯನ್ ಲೀಗ್ ಕ್ರಿಕೆಟ್ ಟ್ರೋಫಿ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ತಂಡ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿತು. ವಿಶ್ವಕರ್ಮ ಬ್ಯಾಂಕ್ ತಂಡ ದ್ವಿತೀಯ ಸ್ಥಾನ ಗಳಿಸಿತು.
ಪಂದ್ಯಾವಳಿಯನ್ನು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿ'ಸೋಜಾ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ವಿಶ್ವಕರ್ಮ ಬ್ಯಾಂಕ್ ಅಧ್ಯಕ್ಷ ಹರೀಶ್ ಆಚಾರ್, ರೋಟರಿ ಜಿಲ್ಲಾ ಮಾಜಿ ಗವರ್ನರ್ ಡಾ. ದೇವದಾಸ್ ರೈ, ಮಾಜಿ ಅಸಿಸ್ಟೆಂಟ್ ಗವರ್ನರ್ ಕೆ.ಎಂ. ಹೆಗ್ಡೆ, ಕೆಪಿಟಿ ಉಪನ್ಯಾಸಕ ಹರೀಶ್, ಉದ್ಯಮಿ ಹೃತ್ವಿಕ್ ಕದ್ರಿ, ವಲಯ ಸೇನಾನಿ ರವಿ ಜಲಾನ್, ಕ್ಲಬ್ ಅಧ್ಯಕ್ಷ ಭಾಸ್ಕರ್ ರೈ ಕಟ್ಟ ಹಾಗೂ ಕಾರ್ಯದರ್ಶಿ ವಿಕಾಸ್ ಕೋಟ್ಯಾನ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌ನ ಕೋಶಾಧಿಕಾರಿ ರಾಜೇಶ್ ಸೀತಾರಾಂ, ಮಾಜಿ ಗವರ್ನರ್ ರಾಜಗೋಪಾಲ್ ರೈ, ಮಾಜಿ ಅಧ್ಯಕ್ಷ ರಾಜೇಶ್ ಶೆಟ್ಟಿ, ಸಂಯೋಜಕರಾದ ಪ್ರದೀಪ್ ಕುಲಾಲ್, ಅಮಿತ್ ರಾಜ್, ಹರೀಶ್ ಸಿ.ಪಿ., ಶೆಲ್ಡನ್ ಕ್ರಾಸ್ತಾ, ಜಾಕ್ಸನ್ ಸಲ್ದಾನ, ಜಗನ್ನಾಥ ಶೆಟ್ಟಿ, ಗೀತಾ ಬಿ. ರೈ, ಪ್ರಮೀಳಾ ಹೆಗ್ಡೆ ಸೇರಿದಂತೆ ಹಲವರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಆಳ್ವಾಸ್ ಕಾಲೇಜಿನ ಕ್ರೀಡಾ ಪ್ರತಿಭೆ ಪ್ರಿಯಾಂಕಾ ಅವರನ್ನು ಸನ್ಮಾನಿಸಲಾಯಿತು.
ಟೂರ್ನಿಯಲ್ಲಿ ರೋಟರಿ ಸೆಂಟ್ರಲ್, ಎಲ್‌ಐಸಿ, ವಿಶ್ವಕರ್ಮ ಬ್ಯಾಂಕ್, ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ, ಟೆಕ್ ರೈಸರ್ಸ್ ಮಂಗಳೂರು ಹಾಗೂ ರಾಯಲ್ ಚಾಲೆಂಜರ್ಸ್ ಮಂಗಳೂರು ಸೇರಿದಂತೆ ಒಟ್ಟು ಆರು ತಂಡಗಳು ಲೀಗ್ ಮಾದರಿಯಲ್ಲಿ ಸ್ಪರ್ಧಿಸಿದ್ದವು.
ಸಮಾರೋಪ ಸಮಾರಂಭದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿಯ ಜನರಲ್ ಮ್ಯಾನೇಜರ್ ಅರುಣ್ ಪ್ರಭಾ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು.