ಬೆಳ್ತಂಗಡಿ: ಅಕ್ರಮ ಜಾನುವಾರು ಸಾಗಾಟದ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಮರ್ಥ ಆರ್. ಗಾಣಿಗೇರ ಹಾಗೂ ಸಿಬ್ಬಂದಿ ತಂಡ ದಾಳಿ ನಡೆಸಿ ಒಬ್ಬ ಜಾನುವಾರನ್ನು ಸಾಗಿಸುತ್ತಿದ್ದ ಪಿಕ್‌ಅಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಜೂನ್ 3ರ ರಾತ್ರಿ ಸೋಮಂತಡ್ಕದ ಮಂಜುಶ್ರೀ ಬಸ್ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿದ ವೇಳೆ, ತೋಟತ್ತಾಡಿ ನಿವಾಸಿ ಅನಿಲ್ ಪಿ (34) ಯಾವುದೇ ಪೂರ್ವಾನುಮತಿ ದಾಖಲೆಗಳಿಲ್ಲದೆ ಜಾನುವಾರನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ.
ವಿಚಾರಣೆ ವೇಳೆ, ರಾಘವೇಂದ್ರ ಭಟ್ (45) ಅವರಿಂದ ಜಾನುವಾರನ್ನು ಖರೀದಿಸಿದ್ದು, ಮಾಂಸಕ್ಕಾಗಿ ತಾನು ಹಾಗೂ ತೋಟತ್ತಾಡಿಯ ತೋಮಸ್ (30) ಮತ್ತು ಕಕ್ಕಿಂಜೆಯ ಕಬೀರ್ (28) ಸೇರಿ ಸಾಗಿಸುತ್ತಿರುವುದಾಗಿ ಅನಿಲ್ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 9/2026ರಡಿ ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಅಧಿನಿಯಮ 2020ರ ಕಲಂ 5, 7 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
Post a Comment