ಸರಣಿ ಬ್ಯಾಟರಿ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, 10 ಬ್ಯಾಟರಿಗಳನ್ನು ವಶಪಡಿಸಿಕೊಂಡ ಪೊಲೀಸರು

ವಿಟ್ಲ : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ನಿಲ್ಲಿಸಿದ್ದ ಲಾರಿಗಳ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಸರಣಿ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಒಟ್ಟು ಐದು ಪ್ರಕರಣಗಳು ದಾಖಲಾಗಿದ್ದವು. ಪ್ರಕರಣಗಳ ತನಿಖೆ ನಡೆಸಿದ ವಿಟ್ಲ ಠಾಣೆ ಪೊಲೀಸರು ಕಾಸರಗೋಡು ಚರ್ಕಳ ನಿವಾಸಿ ಅಬ್ದುಲ್ ಶಮೀರ್ ಪಿ.ಎ. (50) ಹಾಗೂ ಕಾಸರಗೋಡು ಮುಟ್ಟತೋಡಿ ನಿವಾಸಿ ಅಬ್ದುಲ್ ಮಜಿದ್ (33) ಅವರನ್ನು ಬಂಧಿಸಿದ್ದಾರೆ.

ಬಂಧಿತರಿಂದ ಕಳವು ಮಾಡಿದ್ದ 10 ಲಾರಿ ಬ್ಯಾಟರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Post a Comment

Previous Post Next Post