ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪರಂಗಿಪೇಟೆಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಮೇಲ್ಛಾವಣಿಯನ್ನು ಕೊರೆದು ಒಳನುಗ್ಗಿ ಹಣ ಹಾಗೂ ಚಿನ್ನಾಭರಣ ಕಳವು ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಮಾರಿಪಳ್ಳ ನಿವಾಸಿ ಮೊಹಮ್ಮದ್ ಶಾಖಿರ್ (33) ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಜುಲೈ 22ರಂದು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 106/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 331(3), 331(4), 305(a) ಹಾಗೂ 62ರ ಅನ್ವಯ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Post a Comment