ಮಂಗಳೂರು ವಿಶ್ವವಿದ್ಯಾಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಕೇಂದ್ರದ ನೂತನ ಅಧ್ಯಕ್ಷರಾಗಿ ಡಾ.ಧನಂಜಯ ಕುಂಬ್ಳೆ ನೇಮಕಗೊಂಡಿದ್ದಾರೆ.
ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾಗಿದ್ದ ಹಿರಿಯ ಪ್ರಾಧ್ಯಾಪಕ ಪ್ರೊ.ನಾಗಪ್ಪ ಗೌಡ ಮಂಗಳವಾರ ಸೇವೆಯಿಂದ ನಿವೃತ್ತಿ ಹೊಂದಿದ್ದು, ಅವರ ಸ್ಥಾನಕ್ಕೆ ಮಂಗಳೂರು ವಿವಿಯ ಕನ್ನಡ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ.ಧನಂಜಯ ಕುಂಬ್ಳೆಯವರನ್ನು ನೇಮಕಗೊಳಿಸಲಾಗಿದೆ.
ಮಂಗಳವಾರ ಪ್ರೊ.ನಾಗಪ್ಪ ಗೌಡ ಅವರು ವಿಭಾಗದ ದಾಖಲೆ ಪತ್ರಗಳನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
ಮಂಗಳೂರು ವಿಶ್ವವಿದ್ಯಾಲಯದ ಎಸ್ಎಸ್ಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿರುವ ಡಾ.ಧನಂಜಯ ಕುಂಬ್ಳೆ, ಡಾ.ದಯಾನಂದ ಪೈ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ, ಕನಕದಾಸ ಅಧ್ಯಯನ ಕೇಂದ್ರ, ತುಳು ಅಧ್ಯಯನ ಪೀಠ, ಎನ್ ಜಿ ಪಾವಂಜೆ ಅಧ್ಯಯನ ಪೀಠ, ರಾಣಿ ಅಬ್ಬಕ್ಕ ಅಧ್ಯಯನ ಪೀಠಗಳ ಸಂಯೋಜಕರಾಗಿ ಹಾಗೂ ಪ್ರಸಾರಾಂಗದ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷರಾಗಿದ್ದಾರೆ.
Tags
ಮಂಗಳೂರು