ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಘಟನೆ ; ಬಸ್‌ಗಾಗಿ ಕಾಯುತ್ತಿದ್ದ ಯುವತಿಗೆ ಹರಿತಾಯುಧದಿಂದ ಯುವಕನಿಂದ ದಾಳಿ; ಸ್ಥಿತಿ ಚಿಂತಾಜನಕ

ಬಂಟ್ವಾಳ: ಕೆಎಸ್‌ಆರ್‌ಟಿಸಿ ಹೊಸ ಬಸ್ ನಿಲ್ದಾಣದ ಬಳಿ ಬಸ್‌ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳ ಮೇಲೆ ಅಪರಿಚಿತ ಯುವಕನೋರ್ವ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಗುರುವಾರ ಸಂಜೆ ಸುಮಾರು 6 ಗಂಟೆಗೆ ನಡೆದಿದೆ.

ಸುಮಾರು 21ರಿಂದ 25 ವರ್ಷದೊಳಗಿನ ಯುವತಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣವೇ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಯುವತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಗಾಯಾಳು ಯುವತಿ ಕಕ್ಯಪದವು ಮೂಲದವಳು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆ ಹಾಗೂ ದಾಳಿಯ ಹಿಂದಿನ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

Post a Comment

Previous Post Next Post