ಬೆಂಗಳೂರು/ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿ ಗಾಳಿ (Heat Wave) ಮತ್ತು ತೀವ್ರ ಉಷ್ಣಾಂಶದ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.
IMD ಈ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಸಾರ್ವಜನಿಕರಿಗೆ ಸಲಹೆಗಳು:
★ಮಧ್ಯಾಹ್ನದ ತೀವ್ರ ಬಿಸಿಲಿನಲ್ಲಿ ಅನಗತ್ಯವಾಗಿ ಹೊರಗಡೆ ಓಡಾಡುವುದನ್ನು ತಪ್ಪಿಸಿ.
★ಸಾಕಷ್ಟು ನೀರು ಹಾಗೂ ದ್ರವ ಆಹಾರ ಸೇವಿಸಿ.
ವೃದ್ಧರು, ಮಕ್ಕಳು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರು ವಿಶೇಷ ಎಚ್ಚರಿಕೆ ವಹಿಸಬೇಕು.
★ತಲೆ ಮುಚ್ಚಿಕೊಂಡು ಹೊರಗೆ ಹೋಗಿ ಹಾಗೂ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆಯುವುದನ್ನು ತಪ್ಪಿಸಿ.
ಹವಾಮಾನ ಇಲಾಖೆಯ ಮುಂದಿನ ಬುಲೆಟಿನ್‌ಗಳನ್ನು ಗಮನಿಸಿ, ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
Post a Comment