Kudroli : ಕುದ್ರೋಳಿ ಕ್ಷೇತ್ರದಲ್ಲಿ ಭಕ್ತಿಭಾವದಿಂದ ಗುರು ಪೂರ್ಣಿಮೆ ಆಚರಣೆ ; ಲೋಕಕಲ್ಯಾಣಾರ್ಥಕ್ಕಾಗಿ ಲಕ್ಷ ತುಳಸಿ ಅರ್ಚನೆ

ಮಂಗಳೂರು : ಶ್ರೀ ಗುರು ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಲೋಕಕಲ್ಯಾಣಾರ್ಥ ಶ್ರೀ ನಾರಾಯಣಗುರು ವೈದಿಕ ಸಮಿತಿಯ ಸಹಯೋಗದಲ್ಲಿ ಭಕ್ತಿಭಾವದಿಂದ ಲಕ್ಷ ತುಳಸಿ ಅರ್ಚನೆ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಗುರು ಪ್ರಾರ್ಥನೆ, ವಿಶ್ವಶಾಂತಿ ಹೋಮ ಹಾಗೂ ಲಕ್ಷ ತುಳಸಿ ಅರ್ಚನೆ ನೆರವೇರಿಸಲಾಯಿತು. ಬಳಿಕ ಮಧ್ಯಾಹ್ನ ಮಹಾಪೂಜೆ ಮತ್ತು ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು. ನೂರಾರು ಭಕ್ತರು ತುಳಸಿ ಅರ್ಚನೆಯಲ್ಲಿ ಪಾಲ್ಗೊಂಡು ಶ್ರೀ ಗುರುಗಳ ಆಶೀರ್ವಾದ ಪಡೆದು ವಿಶೇಷ ಪೂಜೆಯಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಕೃತೀನ್ ಧೀರಜ್ ಅಮೀನ್, ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಾ. ಬಿ. ಜಿ. ಸುವರ್ಣ, ಸದಸ್ಯರಾದ ಲೀಲಾಕ್ಷ ಕರ್ಕೇರ, ಚಂದನ್‌ದಾಸ್, ವಾಸುದೇವ ಕೋಟ್ಯಾನ್, ಶೈಲೇಂದ್ರ ಸಿ. ಸುವರ್ಣ ಹಾಗೂ ಪ್ರಮುಖರಾದ ಧರ್ಮರಾಜ ಅಮ್ಮುಂಜೆ, ಜಯರಾಮ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಗುರು ಪೂರ್ಣಿಮೆಯ ಅಂಗವಾಗಿ ನಡೆದ ಈ ಧಾರ್ಮಿಕ ಕಾರ್ಯಕ್ರಮವು ಭಕ್ತರ ಅಪಾರ ಭಾಗವಹಿಸುವಿಕೆಯಿಂದ ಭಕ್ತಿ ಮತ್ತು ಆಧ್ಯಾತ್ಮಿಕತೆಯ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು.

Post a Comment

Previous Post Next Post