ಮಂಗಳೂರು: ನಗರದ ಬಿಕರ್ನಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಿಂದ ಭಾನುವಾರ ಸಂಜೆ ಕೆಲಕಾಲ ವಾಹನ ಸಂಚಾರದಲ್ಲಿ ದಟ್ಟಣೆ ಉಂಟಾಯಿತು.
ಮಂಡ್ಯ ನೋಂದಣಿ ಸಂಖ್ಯೆಯ ಕಾರು ಹಾಗೂ ತಮಿಳುನಾಡು ನೋಂದಣಿಯ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಲಾರಿ ಕಾರಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿಗೆ ಹಾನಿಯಾಗಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ವಾಹನಗಳ ಸಂಚಾರವನ್ನು ಸುಗಮಗೊಳಿಸಿದರು.
ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Post a Comment