Mangaluru : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ: ಜುಲೈ 2ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜಿಲ್ಲೆಯಾದ್ಯಂತ 'ರೆಡ್ ಅಲರ್ಟ್' ಘೋಷಿಸಿದೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮಹತ್ವದ ಆದೇಶಗಳನ್ನು ಹೊರಡಿಸಿದೆ:

ಶಾಲಾ-ಕಾಲೇಜುಗಳಿಗೆ ರಜೆ: ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ದಿನಾಂಕ 02.07.2026ರಂದು ರಜೆ ಘೋಷಿಸಲಾಗಿದೆ.

ಪಾಲಕರಿಗೆ ಸೂಚನೆ:  ಕೆರೆ, ನದಿ ತೀರ ಮತ್ತು ಸಮುದ್ರ ತೀರದಂತಹ ತಗ್ಗು ಪ್ರದೇಶಗಳಿಗೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು.

ಮೀನುಗಾರರಿಗೆ ಎಚ್ಚರಿಕೆ: ಸಮುದ್ರದ ಸ್ಥಿತಿ ಹದಗೆಟ್ಟಿರುವ ಕಾರಣ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಪ್ರವಾಸಿಗರಿಗೆ ನಿರ್ಬಂಧ: ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ತೀರ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ನಿರ್ಬಂಧ ವಿಧಿಸಲಾಗಿದೆ.
 
ಅಧಿಕಾರಿಗಳಿಗೆ ಸೂಚನೆ: ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ಪ್ರತಿಯೊಂದು ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಲು ಸೂಚಿಸಲಾಗಿದೆ.
Previous Post Next Post