NEET PAPER LEAK | ಮಧ್ಯರಾತ್ರಿ ಇನ್‌ಸ್ಟಾಗ್ರಾಂ ರೀಲ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ; ಪೇಪರ್ ಸೋರಿಕೆ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಬಗ್ಗೆ ಸಂದೇಶ



ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯರಾತ್ರಿ ತಮ್ಮ ಇನ್‌ಸ್ಟಾಗ್ರಾಂ ರೀಲ್ಸ್ ಮೂಲಕ ದೇಶದ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ಕುರಿತು ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿದ್ಯಾರ್ಥಿಗಳ ಒಂದು ವರ್ಷದ ಶ್ರಮ ವ್ಯರ್ಥವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಪ್ರಮುಖ ಜವಾಬ್ದಾರಿ ಎಂದು ಪ್ರಧಾನಿ ಹೇಳಿದ್ದಾರೆ. ಪೇಪರ್ ಸೋರಿಕೆ ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಈ ರೀತಿಯ ಪ್ರಕರಣಗಳಿಗೆ ತ್ವರಿತ ನ್ಯಾಯ ಒದಗಿಸಲು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ಸ್ಥಾಪನೆ ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ತರಲು ಸರ್ಕಾರ ಸಿದ್ಧವಾಗಿದೆ ಎಂದು ಮೋದಿ ಹೇಳಿದ್ದಾರೆ. ಸಂಬಂಧಿತ ಮಸೂದೆಗೆ ಸಚಿವ ಸಂಪುಟದ ಅನುಮೋದನೆ ಬಳಿಕ ಸಂಸತ್ತಿನಲ್ಲಿ ಮಂಡಿಸಿ ಶೀಘ್ರವೇ ಕಾನೂನಾಗಿ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

ಪ್ರಧಾನಿಯ ಈ ಮಧ್ಯರಾತ್ರಿ ರೀಲ್ಸ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಗಮನ ಸೆಳೆದಿದೆ.

Post a Comment

Previous Post Next Post