ಬಂಟ್ವಾಳ : ನೀಟ್ ಪ್ರತಿಭಟನೆಯನ್ನು ಧಾರ್ಮಿಕವಾಗಿ ತಿರುಚಿ ಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ತರಬಹುದಾದ ಬರಹವನ್ನು ವಾಟ್ಸಾಪ್ ಸ್ಟೇಟಸ್‌ನಲ್ಲಿ ಪ್ರಕಟಿಸಿದ ಆರೋಪದಡಿ ವಿಟ್ಲ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ,v ದೂರುದಾರರು ಸದಸ್ಯರಾಗಿರುವ KFC KHANDIGA ಎಂಬ ವಾಟ್ಸಾಪ್ ಗುಂಪಿನಲ್ಲಿ ಜುಲೈ 23ರಂದು ಹರಿದಾಡಿದ ಸ್ಕ್ರೀನ್‌ಶಾಟ್‌ನಲ್ಲಿ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಬರಹಗಳು ಕಂಡುಬಂದಿವೆ. ಪರಿಶೀಲನೆ ನಡೆಸಿದಾಗ ಬಂಟ್ವಾಳದ ಕೇಪು ನಿವಾಸಿ ಭರತ್ (36) ಅವರು ಆ ಬರಹವನ್ನು ತಮ್ಮ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಂಚಿಕೊಂಡಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 160/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 197(1)(a), 197(1)(c) ಹಾಗೂ 353(2) ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
Post a Comment